ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಇಂದು ಸಭೆ ಸೇರಲಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಹಿರಿಯ ನಾಯಕರು ಹಾಗೂ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

119 ಸ್ಥಾನಗಳ ವಿಧಾನಸಭೆಯಲ್ಲಿ 64 ಸ್ಥಾನಗಳನ್ನು ಗೆದ್ದ ನಂತರ, ಕಾಂಗ್ರೆಸ್ ನಾಯಕರ ನಿಯೋಗವು ಭಾನುವಾರ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿತು.

ಟಿಪಿಸಿಸಿ ಅಧ್ಯಕ್ಷ ಅನುಮುಲ ರೇವಂತ್ ರೆಡ್ಡಿ ಮುಖ್ಯಮಂತ್ರಿ ಗಾದಿಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ರೆಡ್ಡಿ ಅವರು ಕೊಡಂಗಲ್ ಕ್ಷೇತ್ರದಿಂದ 32,000 ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಆರ್‌ಎಸ್‌ನ ಪಟ್ನಂ ನರೇಂದ್ರ ರೆಡ್ಡಿ ಅವರನ್ನು ಸೋಲಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಸುಮಾರು 10 ವರ್ಷಗಳ ಆಡಳಿತವು ಭಾನುವಾರ ಅಂತ್ಯಗೊಂಡಿತು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
.Telangana Assembly Election Results 2023: ರಾಜೀನಾಮೆ ಸಲ್ಲಿಸಿದ ಕೆಸಿಆರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.