ಹೈದರಾಬಾದ್: ಚುನಾವಣೆ ವೇಳೆ ಸಲ್ಲಿಸಿದ ಪ್ರಮಾಣಪತ್ರ ಕುರಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್‌ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದ್ದ ವಿಶೇಷ ಸೆಷನ್ಸ್ ನ್ಯಾಯಾಧೀಶರೊಬ್ಬರನ್ನು ತೆಲಂಗಾಣ ಹೈಕೋರ್ಟ್ ಅಮಾನತುಗೊಳಿಸಿದೆ.

ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಜಯಕುಮಾರ್ ಅಮಾನತುಗೊಂಡವರು.

‘ರಾಘವೇಂದ್ರ ರಾಜು ಎಂಬುವವರು ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಪ್ರಾಥಮಿಕ ವಿಚಾರಣೆ ನಡೆಸದೆ ಹಾಗೂ ದೂರುದಾರರ ಹೇಳಿಕೆಯನ್ನು ದಾಖಲಿಸದೇ ಸಿಇಸಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಲಾಗಿದೆ. ಈ ವಿಷಯದಲ್ಲಿ ನ್ಯಾಯಾಧೀಶ ಜಯಕುಮಾರ್ ಅವರು ‘ಅನಗತ್ಯ ಅವಸರ’ದಲ್ಲಿ ಕ್ರಮ ಕೈಗೊಂಡಿದ್ದಾರೆ’ ಎಂದು ಹೈಕೋರ್ಟ್ ಹೇಳಿದೆ.

‘ಕರ್ತವ್ಯ ನಿರ್ವಹಣೆ ವಿಚಾರದಲ್ಲಿ ನ್ಯಾಯಾಧೀಶರಿಂದ ಗಂಭೀರ ಲೋಪವಾಗಿದೆ’ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣ ಅಬಕಾರಿ ಸಚಿವ ವಿ.ಶ್ರೀನಿವಾಸ ಗೌಡ ಅವರು ಚುನಾವಣೆ ವೇಳೆ ಸಲ್ಲಿಸಿದ್ದ ಪ್ರಮಾಣಪತ್ರವನ್ನು ತಿರುಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಸಚಿವ ಶ್ರೀನಿವಾಸ ಗೌಡ, ಸಿಇಸಿ ರಾಜೀವ್‌ಕುಮಾರ್ ಹಾಗೂ ಇತರರ ವಿರುದ್ಧ ಆಗಸ್ಟ್ 11It was filed as an affidavit.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.