ಹೈದರಾಬಾದ್: ನಟ ನಾಗಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ವಿಚ್ಛೇದನಕ್ಕೆ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮ ರಾವ್ (ಕೆಟಿಆರ್) ಕಾರಣ ಎಂಬ ಹೇಳಿಕೆಯನ್ನು ತೆಲಂಗಾಣ ಅರಣ್ಯ ಮತ್ತು ಪರಿಸರ ಸಚಿವೆ ಕೊಂಡಾ ಸುರೇಖಾ ಹಿಂಪಡೆದಿದ್ದಾರೆ.
.ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ಕೆಟಿಆರ್ ನಂಟು: ಸಚಿವೆ ಕೊಂಡಾ ಸುರೇಖಾ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನನ್ನ ಹೇಳಿಕೆಗಳು ನಿಮಗೆ ಅಥವಾ ನಿಮ್ಮ ಅಭಿಮಾನಿಗಳಿಗೆ ನೋವುಂಟು ಮಾಡಿದ್ದರೆ, ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆದುಕೊಳ್ಳುತ್ತೇನೆ. ಅನ್ಯಥಾ ಭಾವಿಸಬೇಡಿ. ನನ್ನ ಹೇಳಿಕೆ ರಾಜಕೀಯ ನಾಯಕರು ಮಹಿಳೆಯರನ್ನು ಕೀಳಾಗಿ ಕಾಣುವುದನ್ನು ಪ್ರಶ್ನಿಸುವ ಉದ್ದೇಶವಾಗಿತ್ತೇ ಹೊರತು ನಿಮ್ಮ (ಸಮಂತಾ) ಭಾವನೆಗಳನ್ನು ನೋಯಿಸುವುದಾಗಿರಲಿಲ್ಲ’ ಎಂದಿದ್ದಾರೆ.

‘ನೀವು ನಿಮ್ಮ ಸ್ವಂತ ಶಕ್ತಿಯಿಂದ ಬೆಳೆದು ಬಂದ ದಾರಿಯ ಬಗ್ಗೆ ನನಗೆ ಅಭಿಮಾನವಿದೆ. ಅಲ್ಲದೆ ಅದು ಇತರರಿಗೆ ಆದರ್ಶವೂ ಆಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.
.ನಾಗಚೈತನ್ಯ-ಸಮಂತಾ ವಿಚ್ಛೇದನ: ಸಚಿವೆ ಸುರೇಖಾ ವಿರುದ್ಧ KTR ಮಾನಹಾನಿ ನೋಟಿಸ್.ವಿಚ್ಛೇದನ ವೈಯಕ್ತಿಕ ವಿಚಾರ; ರಾಜಕೀಯದಿಂದ ನನ್ನ ಹೆಸರು ದೂರವಿಡಿ: ಸಮಂತಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.