ಹೈದರಾಬಾದ್: ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಮುಖ್ಯಸ್ಥ, ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ ಅವರನ್ನು ಪರಿಗಣಿಸಿ ಸ್ಪೀಕರ್ ಗಡ್ಡಂ ಪ್ರಸಾದ್ ಕುಮಾರ್ ಅವರು ಸದನದಲ್ಲಿ ಶನಿವಾರ ಘೋಷಿಸಿದ್ದಾರೆ.

‘ತೆಲಂಗಾಣ ವಿಧಾನಸಭೆಯಲ್ಲಿ 39 ಸದಸ್ಯರ ಬಲ ಹೊಂದಿರುವ ಬಿಆರ್ಎಸ್ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಆದ್ದರಿಂದ, ನಾನು ಭಾರತ ರಾಷ್ಟ್ರ ಸಮಿತಿ ಶಾಸಕಾಂಗ ಪಕ್ಷವನ್ನು ಮುಖ್ಯ ವಿರೋಧ ಪಕ್ಷವೆಂದು ಗುರುತಿಸಿದ್ದೇನೆ. ಅದರ ನಾಯಕ ಕೆ. ಚಂದ್ರಶೇಖರ್ ರಾವ್ ಅವರು ವಿರೋಧ ಪಕ್ಷದ ನಾಯಕರಾಗಿ ಗುರುತಿಸಲ್ಪಟ್ಟಿದ್ದಾರೆ’ ಎಂದು ಸ್ಪೀಕರ್ ತಿಳಿಸಿದ್ದಾರೆ.
.ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆಯಿಂದ ಬಿಡುಗಡೆ.ತೆಲಂಗಾಣ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವಿರೋಧ ಆಯ್ಕೆ.
ಇತ್ತೀಚೆಗೆ ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್, ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೆ ಏರಿತ್ತು. ಬಿಆರ್ಎಸ್ 39 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಕಳೆದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.