ಹೈದರಾಬಾದ್: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ವೇಳೆ ಮೃತಪಟ್ಟ ಸುಮಾರು 700 ರೈತರ ಕುಟುಂಬದವರಿಗೆ ತಲಾ ₹3 ಲಕ್ಷ ಪರಿಹಾರ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತ ರೈತರ ಕುಟುಂಬದವರಿಗೆ ಕೇಂದ್ರ ಸರ್ಕಾರವು ತಲಾ ₹25 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ತಪ್ಪು ನೀತಿಯ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕಾದ್ದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ಓದಿ:ಎಂಎಸ್ಪಿ ಶಾಸನಬದ್ಧ ಆಗುವವರೆಗೂ ರೈತರ ಪ್ರತಿಭಟನೆ ನಿಲ್ಲದು: ವರುಣ್ ಗಾಂಧಿ

ಕೃಷಿ ಕಾಯ್ದೆಗಳ ರದ್ದತಿ ನಿರ್ಧಾರವು ರೈತರ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿರುವ ರಾವ್, ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನಾನಿರತ ರೈತರ ಮೇಲೆ ಹಾಗೂ ಅವರನ್ನು ಬೆಂಬಲಿಸಿದವರ ಮೇಲೆ ದೇಶದ್ರೋಹವೂ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ದೂರಿದ್ದಾರೆ.

ಪ್ರಧಾನಿಯವರು ಕ್ಷಮೆ ಕೇಳಿದರಷ್ಟೇ ಸಾಲದು. ಅದರಿಂದ ರೈತರಿಗೆ ಸಹಾಯವಾಗದು. ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಿ. ಕನಿಷ್ಠ ಬೆಂಬಲ ಬೆಲೆ ಖಾತರಿಗೆ (ಎಂಎಸ್ಪಿ) ಕಾನೂನು ರೂಪಿಸಲಿ ಎಂದು ಚಂದ್ರಶೇಖರ ರಾವ್ ಹೇಳಿದ್ದಾರೆ.

ರೈತರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ದಿಶಾ ರವಿ ಎಂಬವರನ್ನು ಬಂಧಿಸಿದ್ದೂ ಸೇರಿದಂತೆ ಈ ರೀತಿಯ ಕೆಲವು ಸಂದರ್ಭಗಳನ್ನು ಅವರು ಉದಾಹರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.