ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಟೆಂಪೊ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ. ಐದು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರು ನೋಯ್ಡಾದಲ್ಲಿ ತರಕಾರಿ ವ್ಯಾಪಾರಿಗಳಾಗಿ ಕೆಲಸ ಮಾಡುತ್ತಿದ್ದರು. ದೀಪಾವಳಿ ಹಬ್ಬ ಆಚರಣೆಗೆಂದು ಟೆಂಪೊದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.

ಅವಘಡದಲ್ಲಿ ಅತುಲ್ (31), ಕನ್ಹೈ (35), ಅವರ ಪತ್ನಿ ಕುಸುಮಾ (30), ಅವರ ಇಬ್ಬರು ಮಕ್ಕಳು ಕಾರ್ತಿಕ್ (8) ಮತ್ತು ಶೀನು (5) ಎಂಬುವವರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಬದೌನ್ ಜಿಲ್ಲಾಧಿಕಾರಿ ನಿಧಿ ಶ್ರೀವಾಸ್ತವ್ ತಿಳಿಸಿದ್ದಾರೆ.

ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.