ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಸನಿಹದಲ್ಲಿ ಶುಕ್ರವಾರ ನಡೆದ ಸ್ಫೋಟದ ಹೊಣೆಯನ್ನು ಜೈಷ್-ಉಲ್-ಹಿಂದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಈ ಕುರಿತು ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಜೈಷ್-ಉಲ್-ಹಿಂದ್ ಉಗ್ರ ಸಂಘಟನೆ, ದಾಳಿಯ ಹೊಣೆ ಹೊತ್ತುಕೊಂಡಿದೆ.

ಇದು ಯಾವ ಮೂಲಕ್ಕೆ ಸೇರಿದ ಉಗ್ರ ಸಂಘಟನೆ ಹಾಗೂ ದಾಳಿಯ ಹಿಂದಿನ ಉದ್ದೇಶ ಏನಾಗಿತ್ತೆಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ:ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸ್ಫೋಟ: ಸಿಸಿಟಿವಿಯಲ್ಲಿ ಇಬ್ಬರ ದೃಶ್ಯ ಸೆರೆ

ಜನವರಿ 29 ಶುಕ್ರವಾರ ಸಂಜೆ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಸನಿಹದಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯದ ಬಗ್ಗೆ ವರದಿಯಾಗಿರಲಿಲ್ಲ.

ಶುಕ್ರವಾರ ಸಂಜೆ ವೇಳೆಗೆ ಸಣ್ಣ ಪ್ರಮಾಣದ ಸುಧಾರಿತ ಸ್ಫೋಟ ಸಾಧನ (ಐಇಡಿ) ಸಿಡಿದಿತ್ತು. ಪರಿಣಾಮ ಹಲವು ವಾಹನಗಳಗಾಜುಗಳು ಪುಡಿಯಾಗಿದ್ದವು.

ಕೆಲವೇ ಅಂತರದಲ್ಲಿ ಗಣರಾಜ್ಯೋತ್ಸವ ಸಂಭ್ರಮದಅಧಿಕೃತ ಮುಕ್ತಾಯದ ಅಂಗವಾಗಿ 'ಬೀಟಿಂಗ್ ರಿಟ್ರೀಟ್' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ರಕ್ಷಣಾ ಸಚಿವರುಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಗರಿಷ್ಠ ಭದ್ರತೆ ಒದಗಿಸಲಾಗಿದೆ. ತನಿಖೆ ವೇಳೆಯಲ್ಲಿ ಇಬ್ಬರು ಅಜ್ಞಾತ ವ್ಯಕ್ತಿಗಳು ಕ್ಯಾಬ್‌ನಿಂದ ಇಳಿದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಸ್ರೇಲ್ ರಾಯಭಾರಿಗೆ ಸಂಬಂಧಿಸಿದ ಕವರ್ ಕೂಡಾ ಪೊಲೀಸರಿಗೆ ಲಭಿಸಿದ್ದು, ವಿಸೃತ ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.