ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಹೌರಾದಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಒಬ್ಬ ಉಗ್ರನನ್ನು ಹತ್ಯೆ ಮಾಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಈ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ’ ಎಂದು ಅವರು ಹೇಳಿದರು.

‘ಮೃತನ ಗುರುತು ಪತ್ತೆ ಪ್ರಕ್ರಿಯೆ ಮುಂದುವರಿದಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ. ತಾನು ಅಲ್– ಬದ್ರ್ ಉಗ್ರ ಸಂಘಟನೆಗೆ ಸೇರಿದ ಸದಸ್ಯನೆಂದು ಹೇಳಿಕೊಂಡ ವಿಡಿಯೊವೊಂದು ಆತ ಸಾವಿಗೀಡಾಗುವ ಸ್ವಲ್ಪ ಹೊತ್ತಿಗೆ ಮೊದಲು ಹರಿದಾಡಿದೆ. ‘ನನ್ನ ಹೆಸರು ಆದಿಲ್ ಮಜೀದ್ ಲೋನ್. ಕುಲ್ಗಾಂ ಜಿಲ್ಲೆಯ ಹೌರಾ ನಿವಾಸಿ. ನಾನು ಅಲ್– ಬದ್ರ್ ಸಂಘಟನೆಯೊಂದಿಗೆ ಹಲವಾರು ದಿನಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ’ ಎಂದು ವಿಡಿಯೊದಲ್ಲಿ ಹೇಳಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.