ಪಣಜಿ: 'ದಿ ಕಾಶ್ಮೀರ್ ಫೈಲ್ಸ್' ಅಶ್ಲೀಲ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ(ಐಎಫ್‌ಎಫ್ಐ) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡವ್ ಲ್ಯಾಪಿಡ್ ಬಣ್ಣಿಸಿದ್ದಾರೆ.

ಐಎಫ್‌ಎಫ್‌ಐ 2022ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಲ್ಯಾಪಿಡ್ ಅವರು, ಚಲನಚಿತ್ರೋತ್ಸವದಲ್ಲಿ ಈ ಚಿತ್ರವನ್ನು ನೋಡಿ ವಿಚಲಿತನಾಗಿದ್ದು, ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್' ಚಿತ್ರದಿಂದ ನಾವು ವಿಚಲಿತರಾಗಿದ್ದು, ಆಘಾತಕ್ಕೊಳಗಾಗಿದ್ದೇವೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಮತ್ತು ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತವಲ್ಲದ ಪ್ರಚಾರ ಮತ್ತು ಅಸಭ್ಯ ಚಲನಚಿತ್ರದಂತೆ ನಮಗೆ ಭಾಸವಾಯಿತು’ ಎಂದು ಅವರು ಹೇಳಿದ್ದಾರೆ.

‘ಈ ಅಭಿಪ್ರಾಯವನ್ನು ನಿಮ್ಮೊಂದಿಗೆ ಬಹಿರಂಗವಾಗಿ ಹಂಚಿಕೊಳ್ಳಲು ಯಾವುದೇ ಹಿಂಜರಿಕೆ ಇಲ್ಲ. ಏಕೆಂದರೆ, ಕಲೆ ಮತ್ತು ಜೀವನಕ್ಕೆ ಅಗತ್ಯವಾದ ವಿಮರ್ಶಾತ್ಮಕ ಚರ್ಚೆಯನ್ನು ಈ ವೇದಿಕೆ ಸ್ವೀಕರಿಸುತ್ತದೆ’ಎಂದು ಲ್ಯಾಪಿಡ್ ಹೇಳಿದರು.

ಮಾರ್ಚ್ 11ರಂದು ಬಿಡುಗಡೆಯಾದ 'ದಿ ಕಾಶ್ಮೀರ್ ಫೈಲ್ಸ್', ಐಎಫ್‌ಎಫ್‌ಐನಲ್ಲಿ ಭಾರತೀಯ ಪನೋರಮಾ ವಿಭಾಗದ ಭಾಗವಾಗಿತ್ತು.

ಈ ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಜೀ ಸ್ಟುಡಿಯೋಸ್ ನಿರ್ಮಾಣ ಮಾಡಿದೆ.

ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.