ಹೈದರಾಬಾದ್: ಕೋವಿಡ್–19 ರೋಗಿಗಳನ್ನು ಸಾಗಿಸುವ ನೆರೆಯ ರಾಜ್ಯಗಳ ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ನಿರ್ಬಂಧ ವಿಧಿಸದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ, ತೆಲಂಗಾಣ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಾಲಯದ ಈ ಆದೇಶದಿಂದ ಕೋವಿಡ್–19 ರೋಗಿಗಳು ಅಲ್ಪಮಟ್ಟಿಗೆ ನಿರಾಳರಾಗಿದ್ದಾರೆ. ಪ್ರಮುಖವಾಗಿ ಆಂಧ್ರಪ್ರದೇಶದ ರೋಗಿಗಳು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇದ್ದ ತೊಡಕು ನಿವಾರಣೆಯಾಗಿದೆ.

‘ಆಂಬ್ಯುಲೆನ್ಸ್ಗಳನ್ನು ತಡೆಯುವ ಹಕ್ಕನ್ನು ಯಾರು ನೀಡಿದ್ದಾರೆ’ ಎಂದು ತೆಲಂಗಾಣ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.