ಲಖನೌ: ಮೂರನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಶಾಲೆಯ ಶೌಚಾಲಯದಲ್ಲಿ ಸ್ವಚ್ಛತಾ ಕೆಲಸಗಾರ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿ ನಗರದಲ್ಲಿ ನಡೆದಿದೆ.

ಆರೋಪಿಯನ್ನು ಅಜಯ್ ಕುಮಾರ್ಎಂದು ಗುರುತಿಸಲಾಗಿದ್ದು, ಮಾನಸ ನಗರದಲ್ಲಿರುವ ಆತನ ನಿವಾಸದಲ್ಲಿ ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಬಾಲಕಿಯು ಶೌಚಾಲಯಕ್ಕೆ ಹೋಗಿದ್ದಾಗ ಒಳನುಗ್ಗಿದ ಸ್ವಚ್ಛತಾ ಕೆಲಸಗಾರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಹೊಡೆಯುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರಿಂದ ಹೆದರಿದ ಬಾಲಕಿಯು ಘಟನೆಯ ಬಗ್ಗೆ ಶಿಕ್ಷಕರಿಗೆ ತಿಳಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿ ಆಕೆಯ ಒಳಉಡುಪುಗಳಲ್ಲಿ ರಕ್ತದ ಕಲೆಗಳನ್ನು ಕಂಡು ಪ್ರಶ್ನಿಸಿದಾಗ ಬಾಲಕಿಯು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾಳೆ.

ಶಾಲಾ ಅಡಳಿತ ಮಂಡಳಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದು, ಪೋಲಿಸರಿಗೆ ತಿಳಿಸದಂತೆ ಮನವೊಲಿಸಿದರು. ಆದರೂ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಸಂತ್ರಸ್ತೆಯ ಪೋಷಕರುತಿಳಿಸಿದ್ದಾರೆ.

ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶಗೊಂಡ ಪೋಷಕರು ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮತ್ತು ಆರೋಪಿಯನ್ನು ಶಿಕ್ಷಿಸುವಂತೆ ಪೊಲೀಸ್ ಠಾಣೆಯಲ್ಲಿ ಗಲಾಟೆ ನಡೆಸಿದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.