ನವದೆಹಲಿ: ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಸಿಬಿಐ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.

ನಿವೃತ್ತ ನ್ಯಾಯಮೂರ್ತಿ ಶುಕ್ಲಾ ಅವರು ಖಾಸಗಿ ಮೆಡಿಕಲ್ ಕಾಲೇಜೊಂದಕ್ಕೆ ಅನುಕೂಲವಾಗುವ ರೀತಿಯಲ್ಲಿ ಆದೇಶ ಹೊರಡಿಸಿದ್ದು ಸೇರಿದಂತೆ 2024–19ರ ನಡುವೆ ಅವ್ಯವಹಾರ ನಡೆಸಿದ್ದಾರೆ ಎಂದು ಸಿಬಿಐ ಪ್ರಕರಣ ದಾಖಲಿಸಿದೆ.

ನಿವೃತ್ತ ನ್ಯಾಯಮೂರ್ತಿ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣ ಇದಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಹಿಂದೆ ಎಫ್ಐಆರ್ ದಾಖಲಿಸಿತ್ತು. ಶುಕ್ಲಾ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಕೋರ್ಟ್ ಅನುಮತಿ ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಲ್ಲಿ ಲಖನೌ, ಮೀರತ್ ಹಾಗೂ ದೆಹಲಿಯಲ್ಲಿನ ವಿವಿಧ ಸ್ಥಳಗಳ ಮೇಲೆ ಸಿಬಿಐ ಶೋಧ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.