ಅಹಮದಾಬಾದ್/ಇಸ್ಲಾಮಾಬಾದ್: ಅರಬ್ಬೀ ಸಮುದ್ರ ತೀರದುದ್ದಕ್ಕೂ ಇರುವ ಭಾರತ ಮತ್ತು ಪಾಕಿಸ್ತಾನ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಪಶ್ಚಿಮ ಭಾರತದ ಗುಜರಾತ್‌ನ ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಾವಿರಾರು ಜನ ಮನೆ ತೊರೆಯುವ ಪರಿಸ್ಥಿತಿ ಎದುರಾಗಿದೆ. ಶುಕ್ರವಾರದ ಒಳಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಾರ ರಾಜ್ಯದಲ್ಲಿ (ಗುಜರಾತ್) ಮಳೆ ಸಂಬಂಧಿತ ಅವಘಡಗಳಲ್ಲಿ 28 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಕರಾವಳಿಯಲ್ಲಿ ಭಾರಿ ಮಳೆ ಮತ್ತು ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.

ಭಾನುವಾರದಿಂದ ಕರಾವಳಿ ಸಮೀಪವಿರುವ ನಗರಗಳಿಂದ ಸುಮಾರು 18 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಿಲಯನ್ಸ್ ಒಡೆತನದ ವಿಶ್ವದ ಅತಿದೊಡ್ಡ ತೈಲ ಸಂಸ್ಕರಣಾಗಾರ ಸಂಕೀರ್ಣವಿರುವ ಜಾಮ್‌ನಗರದಲ್ಲಿ ಭಾರಿ ಮಳೆ ಸುರಿದಿದೆ ಎಂದು ಜಿಲ್ಲಾಧಿಕಾರಿ ಬಿ.ಕೆ.ಪಾಂಡ್ಯ ತಿಳಿಸಿದ್ದಾರೆ.

ಶುಕ್ರವಾರದ ವೇಳೆಗೆ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ. ಇದು ಮುಂದಿನ ಎರಡು ದಿನಗಳಲ್ಲಿ ಭಾರತೀಯ ಕರಾವಳಿಯಿಂದ ದೂರ ಚಲಿಸುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಚಂಡಮಾರುತ ಹಿನ್ನೆಲೆ ಪಾಕಿಸ್ತಾನದಲ್ಲಿ ಶನಿವಾರದವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನ ಭರೂಚ್, ಕಚ್ ಮತ್ತು ಸೌರಾಷ್ಟ್ರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದೂ ಐಎಂಡಿ ಮುನ್ಸೂಚನೆ ನೀಡಿದೆ.
.Typhoon Shanshan | ಜಪಾನ್ಗೆ ಅಪ್ಪಳಿಸಿದ ಚಂಡಮಾರುತ; ಮೂರು ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.