ಅಲೀಗಡ: ಹಿಂದೂ ದೇವಾಲಯಗಳ ಮುಂದೆ ಕುರಾನ್ ಪಠಣ ಮಾಡುವುದಾಗಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮಹಿಳಾ ಘಟಕದ ನಾಯಕಿ ರುಬಿನಾ ಖಾನ್ ಹೇಳಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಅವರ ವಿರುದ್ಧ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ದೇಶದಾದ್ಯಂತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ಮಧ್ಯೆ ಹಿಂದೂ ಕಾರ್ಯಕರ್ತರು ಅಲೀಗಡದ 21 ಕ್ರಾಸಿಂಗ್ ಪಾಯಿಂಟ್‌ನಲ್ಲಿ ಧ್ವನಿವರ್ಧಕ ಅಳವಡಿಸಿ ಹನುಮಾನ್ ಚಾಲೀಸ ಪಠಿಸುವುದಾಗಿ ಪ್ರಕಟಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ರುಬಿನಾ, ಮುಸ್ಲಿಂ ಮಹಿಳೆಯರು ದೇವಾಲಯಗಳ ಮುಂದೆ ಕುರಾನ್ ಪಠಿಸುವುದಾಗಿ ಹೇಳಿದ್ದಾರೆ.

'ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸುವ ಮೂಲಕ ಮುಸ್ಲಿಂ ಸಮುದಾಯವನ್ನು ಉದ್ದೇಶಪೂರ್ವಕವಾಗಿಯೇ ಗುರಿಯಾಗಿಸಲಾಗುತ್ತಿದೆ. ರಾಜ್ಯ ಸರ್ಕಾರವು ಬಜರಂಗ ದಳದಂತಹ ಬಲಪಂಥೀಯ ಸಂಘಟನೆಗಳ ಬಗ್ಗೆ ಮೃದು ಧೋರಣೆ ಹೊಂದಿದೆ' ಎಂದು ಆರೋಪಿಸಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದು, 'ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮುಖಂಡರು ಲಾಭ ಪಡೆಯುವುದನ್ನು ನಿಲ್ಲಿಸಬೇಕು. ನಮಾಜ್ ಅನ್ನು ಮಸೀದಿಗಳಲ್ಲಿ ನಡೆಸಬೇಕು, ದೇವಾಲಯಗಳ ಮುಂದೆ ಅಲ್ಲ...' ಎಂದಿದ್ದಾರೆ.

ಇದನ್ನೂ ಓದಿ–ಮಹಾರಾಷ್ಟ್ರ: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ

ಜನರನ್ನು ಪ್ರಚೋದಿಸುವಂತಹ ಹೇಳಿಕೆ ನೀಡುವುದನ್ನು ಮುಖಂಡರು ನಿಲ್ಲಿಸಬೇಕು ಎಂದು ಹನುಮಾನ್ ಗಡಿ ದೇವಾಲಯದ ಮಹಂತ ರಾಜು ದಾಸ್ ಹೇಳಿದ್ದಾರೆ.

'ಯಾರಾದರು ದೂರು ತಂದರೆ, ನಾವು ದೇವಸ್ಥಾನದ ಧ್ವನಿವರ್ಧಕಗಳ ಧ್ವನಿಯ ಪ್ರಮಾಣವನ್ನು ಕಡಿಮೆ ಮಾಡುತ್ತೇವೆ. ಮುಸ್ಲಿಮರೂ ಸಹ ಅದನ್ನು ಅನುಸರಿಸಬೇಕು, ಇದು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿದೆ' ಎಂದಿದ್ದಾರೆ.

ಇದನ್ನೂ ಓದಿ–ಉತ್ತರ ಪ್ರದೇಶದಲ್ಲಿ ಮುನ್ನೆಚ್ಚರಿಕೆ: ಪೊಲೀಸರ ರಜೆ ರದ್ದುಪಡಿಸಿ ಸಿಎಂ ಯೋಗಿ ಆದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.