ಶ್ರೀನಗರ: ಹಿಜ್ಬುಲ್ ಮುಜಾಹಿದೀನ್ನ ಮೂವರು ಕಾರ್ಯಕರ್ತರನ್ನು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಮೊಹಮ್ಮದ್ ಅಬಾಸ್ ವೇಗಯ್, ಗೌಹರ್ ಶಫಿ ಮಿರ್ ಮತ್ತು ನಿಸಾರ್ ರೆಹಮನ್ ಶೇಕ್ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತೊಯ್ಯುತ್ತಿದ್ದ ಮಾಹಿತಿ ಪಡೆದ ಪೊಲೀಸರು ಎಚ್ಚೆತ್ತು ದಾಡೇರ್ಕೋಟ್ – ಅಲಂಗಂಜ್ ನಡುವೆ ಕಾರ್ಯಾಚಾರಣೆ ಆರಂಭಿಸಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರನ್ನು ಅಡ್ಡಗಟ್ಟಿ ಬಂಧಿಸಿದ್ದಾರೆ.

ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮ್ಯಾಗಜೈನ್ಸ್ ಮತ್ತು 13 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರ ತಿಳಿಸಿದ್ದಾರೆ.

ನಿರಂತರ ವಿಚಾರಣೆಯ ನಂತರ ಅವರು ಭಯೋತ್ದಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್ನ ಬೆಂಬಲಿಗರು ಎಂದು ಬಹಿರಂಗಗೊಂಡಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.