ಗುನಾ: 13 ವರ್ಷದ ಬಾಲಕಿ ಮೇಲೆ ಮೂವರು ಬಾಲಕರು ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ವರದಿಯಾಗಿದೆ.

ಬಾಲಕರು ಸೋಮವಾರ ಮಧ್ಯಾಹ್ನ ಈ ಕೃತ್ಯವೆಸಗಿದ್ದಾರೆ. ಆದರೆ, ಒಂದು ದಿನ ತಡವಾಗಿ (ಮಂಗಳವಾರ) ಬೆಳಕಿಗೆ ಬಂದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ ಆರೋಪಿಗಳು 16 ರಿಂದ 17 ವರ್ಷದೊಳಗಿನವರು ಎಂದು ಪ್ರಕರಣ ಸಂಬಂಧ ದಾಖಲಾಗಿರುವ ದೂರನ್ನು ಉಲ್ಲೇಖಿಸಿ ಬಮೊರಿ ಪೊಲೀಸ್ ಠಾಣೆಯ ಎಎಸ್ಐ ಅರವಿಂದ್ ಜಿ. ತಿಳಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಬಾಲಕರನ್ನು ಶೀಘ್ರವೇ ಬಂಧಿಸಲಾಗುವುದು ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.