ನವದೆಹಲಿ: ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಗುರುವಾರ(ಇಂದು) ಸಂಸತ್‌ನಿಂದ ಅಮಾನತುಗೊಳಿಸಲಾಗಿದೆ.

ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಇದರಿಂದ ಲೋಕಸಭೆಯಿಂದ ಅಮಾನತುಗೊಂಡ ಸಂಸದರ ಒಟ್ಟು ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು.
.ಕಲಾಪಕ್ಕೆ ಅಡ್ಡಿ: ಲೋಕಸಭೆಯಿಂದ ಮತ್ತೆ ಇಬ್ಬರು ಸಂಸದರ ಅಮಾನತು.
‘ಈ ಮೂವರು ಸದನ ಮತ್ತು ಪೀಠದ ಆದೇಶವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಫಲಕಗಳನ್ನು ಪ್ರದರ್ಶಿಸಿಸುವ ಮೂಲಕ ಸದನದ ಬಾವಿಗೆ ಇಳಿದು ದುರ್ವರ್ತನೆ ತೋರಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಮಾನತುಗೊಳಿಸಲಾಗಿದೆ' ಎಂದು ಜೋಶಿ ಹೇಳಿದರು.

ಸಂಸತ್‌ನಲ್ಲಿ ಭದ್ರತಾ ಲೋಪ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿ ಗದ್ದಲ ಸೃಷ್ಟಿಸಿ ಉಭಯ ಸದನಗಳಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇತ್ತೀಚೆಗೆ ಒಟ್ಟು 143 ಸಂಸದರು ಅಮಾನತುಗೊಂಡಿದ್ದರು. ಈಗ ಅವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಅವರಲ್ಲಿ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಸಂಸದರು ಸೇರಿದ್ದಾರೆ.
.ಸಂಸದರ ಅಮಾನತು: ಕಾಂಗ್ರೆಸ್ ಪ್ರತಿಭಟನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.