ಶ್ರೀನಗರ: ಶ್ರೀನಗರ ಮತ್ತು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು (ಶನಿವಾರ) ಸೇನೆ ಹಾಗೂ ಪೊಲೀಸರು ನಡೆಸಿದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹೊಡೆದುರುಳಿಸಲಾಗಿದೆ.

ಘಟನೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಇಬ್ಬರು ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಮೊದಲ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಅನಂತನಾಗ್ನ ಶಾಂಗಸ್-ಲರ್ನೂ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಈ ವೇಳೆ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಹತ್ಯೆಗೀಡಾದ ಉಗ್ರರ ಪೈಕಿ ಒಬ್ಬ ವಿದೇಶಿ ಮೂಲದವನು. ಮತ್ತೊಬ್ಬರು ಸ್ಥಳೀಯ ನಿವಾಸಿ ಎನ್ನಲಾಗಿದೆ. ಅವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ನಡೆದ ಎರಡನೇ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಪಾಕಿಸ್ತಾನದ ನಿವಾಸಿ ಲಷ್ಕರ್-ಎ-ತಯಬಾ ಸಂಘಟನೆಯ ಕಮಾಂಡರ್ ಉಸ್ಮಾನ್ ಎಂಬ ಉಗ್ರನನ್ನು ಹತ್ಯೆ ಮಾಡಿವೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಮತ್ತು ಮತ್ತಿಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.