ನವದೆಹಲಿ: ತಿರುಪತಿ ಲಾಡು ವಿವಾದದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಅರ್ಜಿಗಳ ವಿಚಾರಣೆ ಗುರುವಾರ ಮಧ್ಯಾಹ್ನ 3.30ಕ್ಕೆ ನಿಗದಿಯಾಗಿತ್ತು. ಆದರೆ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕೈಗೆತ್ತಿಕೊಳ್ಳುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಾಡಿದ ಮನವಿಯನ್ನು ಪೀಠವು ಪುರಸ್ಕರಿಸಿತು.

‘ನೀವು ಅನುಮತಿ ನೀಡಿದರೆ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಸರಿಯಾಗಿ ನಾನು ವಾದ ಮಂಡಿಸುತ್ತೇನೆ’ ಎಂದು ಮೆಹ್ತಾ ಅವರು, ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವನ್ನು ಕೇಳಿಕೊಂಡರು.

ಈ ವಿಷಯದ ಬಗ್ಗೆ ಸೆಪ್ಟೆಂಬರ್ 30ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ತಿರುಪತಿ ಲಾಡು ವಿವಾದ ಕುರಿತ ತನಿಖೆಯನ್ನು ರಾಜ್ಯ ಸರ್ಕಾರ ನೇಮಿಸಿರುವ ಎಸ್ಐಟಿ ಮುಂದುವರಿಸಬೇಕೇ ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂಬುದನ್ನು ನಿರ್ಧರಿಸಲು ನೆರವಾಗುವಂತೆ ತುಷಾರ್ ಮೆಹ್ತಾ ಅವರನ್ನು ಕೇಳಿಕೊಂಡಿತ್ತು.

ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನ ಅಂಶ ಹೊಂದಿದ್ದ ತುಪ್ಪ ಬಳಸಲಾಗಿದೆ ಎಂಬ ಹೇಳಿಕೆಯನ್ನು ಪ್ರಬಲ ಪುರಾವೆಗಳು ಇಲ್ಲದೆಯೇ ನೀಡಿದ್ದಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.
.4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ.ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ CJI ಡಿ.ವೈ.ಚಂದ್ರಚೂಡ್.ತಿರುಪತಿ ಲಡ್ಡು ತಯಾರಿಕೆಗೆ 14 ಲಕ್ಷ ಕೆಜಿ ನಂದಿನಿ ತುಪ್ಪ.ಲಾಡು ವಿವಾದ| ಕಲಬೆರಕೆ ತುಪ್ಪ ಬಳಸಿದ್ದಕ್ಕೆ ಪುರಾವೆ ಇದೆಯೇ?: ನಾಯ್ಡುಗೆ SC ತರಾಟೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.