ಕೋಲ್ಕತ್ತ: ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೃತಪಟ್ಟಿರುವ ಅಶೋಕ್ ಶಾ ಅವರು ಜಿಲ್ಲೆಯ ಜಗತ್ದಲ್ನ ವಾರ್ಡ್ ನಂ.12ರ ಟಿಎಂಸಿ ಅಧ್ಯಕ್ಷರಾಗಿದ್ದರು. ಅಶೋಕ್ ಅವರು ಜಗತ್ದಲ್ನ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಚಹಾ ಅಂಗಡಿಯೊಂದರ ಬಳಿ ನಿಂತಿದ್ದ ವೇಳೆ ಅವರತ್ತ ಬಾಂಬ್ಗಳನ್ನು ಎಸೆದ ದುಷ್ಕರ್ಮಿಗಳು ಬಳಿಕ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

‘ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಆರಂಭಿಸಿದ್ದೇವೆ. ಈಗಾಗಲೇ ಶಂಕಿತರ ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾವುದೇ ರಾಜಕೀಯ ಸಂಪರ್ಕವಿರುವುದು ಕಂಡುಬಂದಿಲ್ಲ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.