ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ಮುಖಂಡ ಮುಕುಲ್ ರಾಯ್ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳುವುದಾಗಿ ಹೇಳಿದ್ದಾರೆ.

ದೆಹಲಿಯಲ್ಲಿ ಈ ವಿಷಯ ಕುರಿತು ಅವರು ಮಾತನಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ನಡುವೆ ನಮ್ಮ ತಂದೆ ಸೋಮವಾರದಿಂದ ಕಾಣೆಯಾಗಿದ್ದಾರೆ ಎಂದು ಮುಕುಲ್ ರಾಯ್ ಪುತ್ರ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ಮಾನಸಿಕ ಆರೋಗ್ಯ ಸರಿ ಇಲ್ಲ, ಅವರನ್ನು ಪತ್ತೆ ಮಾಡಿಕೊಡಿ ಎಂದು ದೂರಿನಲ್ಲಿ ಹೇಳಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಕಾಣಿಸಿಕೊಂಡ ಮುಕುಲ್ ರಾಯ್ ‘ನಾನು ಮಾನಸಿಕವಾಗಿ ಬಿಜೆಪಿಯಲ್ಲಿರುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿರುವೆ‘ ಎಂದು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿದ್ದ ಮುಕುಲ್ ರಾಯ್ 2017ರಲ್ಲಿ ಬಿಜೆಪಿ ಸೇರಿದ್ದರು. ನಂತರ ಬಿಜೆಪಿ ತ್ಯಜಿಸಿ 2021ರಲ್ಲಿ ಟಿಎಂಸಿ ಸೇರಿದರು. ಇದೀಗ ಮತ್ತೆ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.