ತಂಜಾವೂರು (ಪಿಟಿಐ): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ಕರ್ನಾಟಕವನ್ನು ಒತ್ತಾಯಿಸಿ ಬಿಜೆಪಿ ತಮಿಳುನಾಡು ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಹಸಿರುಶಾಲು ಧರಿಸಿ, ಎತ್ತಿನಗಾಡಿ ಮೆರವಣಿಗೆ ನಡೆಸಿದ ಮುಖಂಡರು, ಕಾರ್ಯಕರ್ತರು, ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಉದ್ದೇಶದ ಈ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಮೇಕೆದಾಟುವಿಗೆ ಸಂಬಂಧಿಸಿ ಕರ್ನಾಟಕದ ಬಿಜೆಪಿ ಸರ್ಕಾರ ಬೆಂಬಲಿಸುವ ವಿರೋಧಪಕ್ಷಗಳ ನಿಲುವನ್ನು ಟೀಕಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ, ‘ಕಾನೂನು ಸ್ಪಷ್ಟವಾಗಿ ನದಿಯ ಕೆಳಹಂತದ ರಾಜ್ಯಗಳ ಪರವಾಗಿದೆ’ ಎಂದರು.

ಕೆಳಹಂತದ ರಾಜ್ಯವಾದ ತಮಿಳುನಾಡು ಸಹಮತವಿಲ್ಲದೆ ಅಣೆಕಟ್ಟು ನಿರ್ಮಿಸುವುದು ಸಾಧ್ಯವೇ ಇಲ್ಲ. ಅಂತರರಾಜ್ಯ ನದಿ ವಿವಾದ ಕಾಯ್ದೆಯೂ ಸ್ಪಷ್ಟವಾಗಿದೆ. ಬಿಜೆಪಿಯು ಎಂದಿಗೂ ರೈತರ ಪರವಾಗಿರಲಿದ್ದು, ಅಣೆಕಟ್ಟು ನಿರ್ಮಿಸಲು ಅವಕಾಶ ಕೊಡುವುದಿಲ್ಲ. ಕರ್ನಾಟಕ ಸರ್ಕಾರ ಇದನ್ನು ಕೈಬಿಡಬೇಕು ಎಂದು ಪ್ರತಿಪಾದಿಸಿದರು.

ಅಣ್ಣಾಮಲೈ ಪ್ರತಿಭಟನೆ... ಐ ಡೋಂಟ್ ಕೇರ್ ಎಂದ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.