ಚೆನ್ನೈ: ಹೊಸದಾಗಿ ಜಾರಿಗೊಂಡಿರುವ ಮೂರು ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಏಕ ಸದಸ್ಯ ಸಮಿತಿ ರಚನೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆದೇಶಿಸಿದ್ದಾರೆ.

ಈ ಸಂಬಂಧ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸ್ಟಾಲಿನ್, ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಎಂ. ಸತ್ಯನಾರಾಯಣನ್ ನೇತೃತ್ವದಲ್ಲಿ ಏಕ ಸದಸ್ಯ ಸಮಿತಿ ರಚನೆಗೆ ಆದೇಶಿಸಿದ್ದಾರೆ.

‘ಈ ಸಮಿತಿಯು ಹೊಸ ಕಾನೂನುಗಳ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಲಿದೆ. ವಕೀಲರು ಸೇರಿದಂತೆ ಈ ಸಂಬಂಧಿತ ರಾಜ್ಯ ಮಟ್ಟದ ವ್ಯಕ್ತಿಗಳು ಜೊತೆ ಸಮಾಲೋಚನೆ ನಡೆಸಲಿದ್ದು, ಒಂದು ತಿಂಗಳಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಡ್ವೊಕೇಟ್ ಜನರಲ್ ಪಿ.ಎಸ್.ರಮಣ್, ರಾಜ್ಯದ ಸರ್ಕಾರಿ ಅಭಿಯೋಜಕ ಹಸನ್ ಮೊಹಮ್ಮದ್ ಜಿನ್ನಾ, ಜಲಸಂಪನ್ಮೂಲ ಸಚಿವ ದುರೈಮುರುಗನ್, ಮುಖ್ಯ ಕಾರ್ಯದರ್ಶಿ ಶಿವದಾಸ್ ಮೀನಾ, ಪೊಲೀಸ್ ಮಹಾನಿರ್ದೇಶಕ ಶಂಕರ್ ಜಿವಾಲ್, ಉನ್ನತ ಅಧಿಕಾರಿಗಳು ಮತ್ತು ರಾಜ್ಯಸಭಾ ಸಂಸದರಾದ ಪಿ ವಿಲ್ಸನ್ ಮತ್ತು ಎನ್ಆರ್ ಇಲಾಂಗೋ ಸಭೆಯಲ್ಲಿ ಭಾಗವಹಿಸಿದ್ದರು.

ಜುಲೈ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದ ಸಿಎಂ ಸ್ಟಾಲಿನ್, ಹೊಸ ಕಾನೂನುಗಳಲ್ಲಿ ಇರುವ ಲೋಪಗಳ ಬಗ್ಗೆ ಧ್ವನಿ ಎತ್ತಿದ್ದರು. ಅಲ್ಲದೆ, ಅವುಗಳ ಜಾರಿಯನ್ನು ಮುಂದೂಡುವಂತೆಯೂ ಮನವಿ ಮಾಡಿದ್ದರು.

ಈ ಕಾನೂನುಗಳ ಮೂಲ ವಿಭಾಗಗಳಲ್ಲಿ ಕೆಲವು ಲೋಪಗಳಿವೆ. ರಾಜ್ಯ ಸರ್ಕಾರಗಳ ಅಭಿಪ್ರಾಯಗಳನ್ನು ಕಾನೂನು ರಚನೆ ವೇಳೆ ಪರಿಗಣಿಸಲಾಗಿಲ್ಲ ಎಂದು ಅವರು ತಿಳಿಸಿದ್ದರು.

ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಸೋಮವಾರದಿಂದ ಜುಲೈ 1 ರಿಂದ ಜಾರಿಗೆ ಬಂದಿವೆ.

ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023, ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳು.

163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳು ಜಾರಿಗೆ ತರಲಾಗಿದೆ.
.ಸಂಪಾದಕೀಯ | ಭಾರತೀಯ ನ್ಯಾಯ ಸಂಹಿತೆ: ಕಾಲದ ಅಗತ್ಯ ಗುರುತಿಸದ ಕಾನೂನು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.