ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿಯಡಿ(ಎನ್‌ಇಪಿ) ಪ್ರಸ್ತಾಪಿಸಲಾದ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ ಸೋಮವಾರ ತಿರಸ್ಕರಿಸಿದೆ.

ರಾಜ್ಯದಲ್ಲಿ ಅನುಸರಿಸುತ್ತಿರುವ ಎರಡು ಭಾಷೆಯ ನೀತಿಯನ್ನು ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ತಮಿಳುನಾಡಿನಲ್ಲಿ ಹಲವು ವರ್ಷಗಳಿಂದ ದ್ವಿಭಾಷಾ ನೀತಿಯನ್ನು ಅನುಸರಿಸಲಾಗುತ್ತದೆ. ಈ ನೀತಿಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ತ್ರಿಭಾಷಾ ಸೂತ್ರವನ್ನುಇಲ್ಲಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ. ಮೊದಲಿನಂತೆ ರಾಜ್ಯದಲ್ಲಿ ತಮಿಳು ಮತ್ತು ಇಂಗ್ಲಿಷ್ ಭಾಷೆಯನ್ನು ಮಾತ್ರ ಕಲಿಸಲಾಗುವುದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.