ಚೆನ್ನೈ: ತಮಿಳುನಾಡಿನಲ್ಲಿ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜನವರಿ 19 ರಿಂದ ಶಾಲೆಯನ್ನು ಪ್ರಾರಂಭಿಸಲಾಗುವುದು. ಆದರೆ ಒಂದು ತರಗತಿಯಲ್ಲಿ 25ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವಂತಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಮಂಗಳವಾರ ತಿಳಿಸಿದರು.

‘10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಮಾರ್ಚ್–ಏಪ್ರಿಲ್ ತಿಂಗಳಲ್ಲಿ ಪಬ್ಲಿಕ್ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತಾಸಕ್ತಿ ಮೇರೆಗೆ ತರಗತಿಗಳನ್ನು ತೆರೆಯಲಾಗುತ್ತಿದೆ. ಅಲ್ಲದೆ ಅವರಿಗೆ ವಿಟಮಿನ್ ಮಾತ್ರೆಗಳನ್ನು ಕೂಡ ನೀಡಲಾಗುವುದು’ ಎಂದು ಅವರು ಹೇಳಿದರು.

‘ಸರ್ಕಾರದ ಮಾರ್ಗಸೂಚಿಯಡಿ ಕೇವಲ ಈ ಎರಡು ತರಗತಿಗಳಿಗಾಗಿ ಶಾಲೆಯನ್ನು ತೆರೆಯಲಾಗುವುದು. ಸಾರ್ವಜನಿಕ ಆರೋಗ್ಯ, ವೈದ್ಯಕೀಯ ತಜ್ಞರು, ಜಿಲ್ಲಾಧಿಕಾರಿಗಳು, ಹಿರಿಯ ಸಚಿವರು ಮತ್ತು ಪೋಷಕರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪಳನಿಸ್ವಾಮಿ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.