ಮುಂಬೈ: ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಇನ್ನು ಮುಂದೆ ದೇವರ ದರ್ಶನ ಹಾಗೂ ಮಂಗಳಾರತಿಯ ಪಾಸ್‌ಗಳನ್ನು ಆನ್‌ಲೈನ್‌ನಲ್ಲೇ ಪಡೆದುಕೊಳ್ಳಬೇಕಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ದೇವಸ್ಥಾನದ ಆಡಳಿತವು ಈ ವ್ಯವಸ್ಥೆ ಜಾರಿಗೊಳಿಸಿದೆ.

‘ಆನ್‌ಲೈನ್ ಪಾಸ್ ವ್ಯವಸ್ಥೆಯು ಇದೇ 14ರಿಂದ ಜಾರಿಯಾಗಲಿದೆ. ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಲ್ಲಿ ಪಾಸ್‌ಗಳು ಲಭ್ಯವಿರಲಿವೆ. ಗುರುವಾರ, ವಾರಾಂತ್ಯ ಹಾಗೂ ವಿಶೇಷ ದಿನಗಳು ಮತ್ತು ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿರಲಿದೆ. ಈ ದಿನಗಳಲ್ಲಿ ದೇವಸ್ಥಾನದ ಆವರಣದಲ್ಲಿರುವ ಕೌಂಟರ್‌ಗಳಲ್ಲಿ ಪಾಸ್‌ಗಳನ್ನು ನೀಡಲಾಗುವುದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.