ಭುವನೇಶ್ವರ: ಒಡಿಶಾದ ಝಾರ್ಸುಗುಡ ಜಿಲ್ಲೆಯ ಮಹಾನದಿಯಲ್ಲಿ ಶುಕ್ರವಾರ ದೋಣಿ ಮಗುಚಿಬಿದ್ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ದೋಣಿ ಮಗುಚಿಬಿದ್ದ ಬೆನ್ನಲ್ಲೇ, ಕಾರ್ಯಾಚರಣೆ ನಡೆಸಿದ್ದ ಒಡಿಶಾದ ವಿಪತ್ತು ಕಾರ್ಯಪಡೆ ಮತ್ತು ಅಗ್ನಿಶಾಮಕದ ದಳದ ಸಿಬ್ಬಂದಿ, ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದರು. ಶನಿವಾರ ಐವರು ಸ್ಕೂಬಾ ಡೈವರ್‌ಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ನದಿಯ ಹೀರಾಕುಡ್ ಜಲಾಶಯದಿಂದ ಮತ್ತೆ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿ ಐವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾಣೆಯಾದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಘಟನೆಯಲ್ಲಿ ಮೃತಪಟ್ಟವರೆಲ್ಲರೂ ನೆರೆಯ ಛತ್ತೀಸಗಢದ ಖರ್ಸೇನಿ ಮೂಲದವರು ಎಂದು ಗೊತ್ತಾಗಿದೆ.

ಒಡಿಶಾದ ಬಾರ್ಗಢ ಜಿಲ್ಲೆಯ ಪಥರ್ಸೇನಿ ಕುಡಾ ಎಂಬಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ದೋಣಿಯಲ್ಲಿ 50 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ 40 ಪ್ರಯಾಣಿಕರನ್ನು ಸ್ಥಳೀಯ ಮೀನುಗಾರರು ಸುರಕ್ಷಿತವಾಗಿ ದಡ ಸೇರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.