ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಲೋಕಸಭೆಗೆ ಎಳೆದು ತರುವ ಸಲುವಾಗಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ತೆಗೆದುಕೊಂಡಿವೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಟಿಎಂಸಿ ರಾಜ್ಯಸಭೆ ಸದಸ್ಯ ಡೆರೆಕ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ನಾಪತ್ತೆಯಾಗಿದ್ದಾರೆ. ಅವರನ್ನು ಲೋಕಸಭೆಗೆ ಎಳೆದು ತರಲು ಅಂತಿಮವಾಗಿ ಅವಿಶ್ವಾಸ ನಿರ್ಣಯವನ್ನು ಪರಿಗಣಿಸಲಾಗಿದೆ ಎಂದಿದ್ದಾರೆ.

ಮುಂದುವರಿದು, 'ಇಂದು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರದ ಕುರಿತು ಚರ್ಚೆ ಆರಂಭಿಸಲು ಈ ಹೃದಯಹೀನ ಸರ್ಕಾರಕ್ಕೆ ಏನು ಅಡ್ಡಿಯಾಗಿದೆ? ಶುರು ಮಾಡೋಣ' ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಇಂದು (ಮಂಗಳವಾರ) ವಿಸ್ತೃತ, ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಲೋಕಸಭಾ ಸದಸ್ಯತ್ವ ಅನರ್ಹತೆ ತೆರವುಗೊಂಡ ಬಳಿಕ ಸಂಸತ್ಗೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪ್ರತಿಪಕ್ಷಗಳ ಪರವಾಗಿ ಅವಿಶ್ವಾಸ ನಿರ್ಣಯದ ಚರ್ಚೆಯನ್ನು ಮುನ್ನಡೆಸಬಹುದು. ಈ ಚರ್ಚೆಗೆ ಕಲಾಪ ಸಲಹಾ ಸಮಿತಿಯು 12 ಗಂಟೆಗಳಷ್ಟು ಕಾಲಾವಕಾಶ ನಿಗದಿ ಮಾಡಿದ್ದು, ಪ್ರಧಾನಿ ಮೋದಿ ಅವರು ಗುರುವಾರ ಉತ್ತರ ನೀಡುವ ನಿರೀಕ್ಷೆ ಇದೆ.

ಮಣಿಪುರ ಪರಿಸ್ಥಿತಿ ಕುರಿತು ಸಂಸತ್ನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ, ಮೋದಿ ಅವರು ಈ ವಿಷಯವಾಗಿ ಸಂಸತ್ನಲ್ಲಿ ಮಾತನಾಡುವುದನ್ನು ಖಾತರಿಪಡಿಸಲು ವಿಪಕ್ಷಗಳು ಅವಿಶ್ವಾಸ ನಿರ್ಣಯದ ತಂತ್ರಗಾರಿಕೆ ಮೊರೆ ಹೋಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.