ವಿಧಾನಸಭೆ ಅಧಿವೇಶನ ಆರಂಭ: ನೂತನ ಶಾಸಕರ ಪ್ರಮಾಣವಚನ ಸ್ವೀಕಾರ, ಪ್ರಧಾನಿ ಮೋದಿಗೆ ಫಿಜಿ ದೇಶದ ಅತ್ಯುನ್ನತ ಗೌರವ, ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ ಸೇರಿದಂತೆ ಈ ದಿನ ಗಮನ ಸೆಳೆದ ಪ್ರಮುಖ 10 ಸುದ್ದಿಗಳು ಇಲ್ಲಿವೆ.

16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಈ ಸುದ್ದಿಯನ್ನು ಪೂರ್ತಿ ಓದಿ

ಪ್ರಧಾನಿ ನರೇಂದ್ರ ಮೋದಿಗೆ ಫಿಜಿ ದೇಶದ ಅತ್ಯುನ್ನತ ಗೌರವವಾದ ‘ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಜಾಗತಿಕ ನಾಯಕತ್ವಕ್ಕಾಗಿ ಪ್ರಧಾನಿ ಮೋದಿಯವರಿಗೆ ಈ ಗೌರವ ಸಿಕ್ಕಿದ್ದು, ಫಿಜಿ ಪ್ರದಾನಿ ಸಿಟಿವೆನಿ ರಬುಕಾ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ. ಫಿಜಿ ದೇಶದವರಲ್ಲದವರು ಪ್ರಶಸ್ತಿ ಸ್ವೀಕರಿಸಿರುವುದು ಇದೇ ಮೊದಲು.

ಈ ಸುದ್ದಿಯನ್ನು ಪೂರ್ತಿ ಓದಿ

ಚಿತ್ರದುರ್ಗ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

ಈ ಸುದ್ದಿಯನ್ನು ಪೂರ್ತಿ ಓದಿ

ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಪೂರ್ತಿ ಓದಿ

ಸಂವಿಧಾನ ಮತ್ತು ದೇವರ ಹೆಸರಲ್ಲಿ ಮಾತ್ರ ಪ್ರಮಾಣ ಸ್ವೀಕರಿಸಬಹುದು. ಇತರ ಯಾವುದೇ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ ಕಾನೂನು ಬದ್ಧ ಆಗುವುದಿಲ್ಲ ಎಂದು ಹಂಗಾಮಿ ಸಭಾಧ್ಯಕ್ಷ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದರೂ, ಕೆಲವು ಶಾಸಕರು ಅದನ್ನು ಪಾಲಿಸಲಿಲ್ಲ.

ಈ ಸುದ್ದಿಯನ್ನು ಪೂರ್ತಿ ಓದಿ

ರಾಜ್ಯ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಕೆ. ಶಶಿ ಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಪ್ರಭುಲಿಂಗ ಕೆ. ನಾವದಗಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶಶಿ ಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಪೂರ್ತಿ ಓದಿ

ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಅಮೆರಿಕಕ್ಕೆ ಭೇಟಿ ನೀಡಲಿದ್ದು, ಜೂನ್ 18ರಂದು ‘ಭಾರತ ಏಕತಾ ದಿನ’ದ ನಡಿಗೆ ಮೂಲಕ ಪ್ರಮುಖ 20 ನಗರಗಳಲ್ಲಿ ಪ್ರಧಾನಿಗೆ ಸ್ವಾಗತ ಕೋರಲು ಅಮೆರಿಕದ ಭಾರತ ಅಮೆರಿಕನ್ ಸಮುದಾಯವು ನಿರ್ಧರಿಸಿರುವುದಾಗಿ ಸಂಘಟಕರು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

ಕನ್ನಡದ ಅಮೃತವರ್ಷಿಣಿ ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಅವರು ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತರಾಗಿದ್ದಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

ಬೆಂಗಳೂರು: ಚೆನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

ಕಳೆದ ಶುಕ್ರವಾರದಿಂದ ‘ಕ್ಯಾಶ್ ಆನ್ ಡೆಲಿವರಿ’ ವೇಳೆ ಶೇಕಡಾ 72%ರಷ್ಟು ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ಆ್ಯಪ್ ಆಧಾರಿತ ಆಹಾರ ಪೂರೈಕೆ ಕಂಪನಿ ಜೊಮ್ಯಾಟೊ ಟ್ವೀಟ್ ಮಾಡಿ ತಿಳಿಸಿದೆ.

ಈ ಸುದ್ದಿಯನ್ನು ಪೂರ್ತಿ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.