ಸನಾತನ ಧರ್ಮ ವಿವಾದ, ಕಾವೇರಿ ನೀರು ಹಂಚಿಕೆ ವಿವಾದ, ಏಕದಿನ ವಿಶ್ವಕಪ್ ಸರಣಿ, ಜವಾನ್ ಮುಂಗಡ ಟಿಕೆಟ್ ಬುಕ್ಕಿಂಗ್, ಮಕ್ಕಳ ಮೇಲಿನ ದೌರ್ಜನ್ಯ, ಐಟಿಸಿಗೆ ದಂಡ, ಚಂದ್ರಯಾನ–3 ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.......

ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಸಂಸತ್ ಭವನದಲ್ಲಿ ಅಧಿವೇಶನ ನಡೆಸಲು ದಿನಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 18ರಂದು ಹಳೆಯ ಕಟ್ಟಡದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗಲಿದೆ. ಆದರೆ, ಸೆಪ್ಟೆಂಬರ್ 19ರಂದು ಗಣೇಶ ಚತುರ್ಥಿಯಂದು ಹೊಸ ಕಟ್ಟಡದಲ್ಲೇ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇರಳದಲ್ಲಿ 2022ನೇ ಸಾಲಿನಲ್ಲಿ ವರದಿಯಾದ ಮಕ್ಕಳ ಮೇಲಿನ ದೌರ್ಜನ್ಯದ ಒಟ್ಟು ಪ್ರಕರಣಗಳಲ್ಲಿ ಬಹುತೇಕವು ಸಂತ್ರಸ್ತರ ಮನೆಗಳಲ್ಲೇ ನಡೆದಿವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಸಮಿತಿ ಸಂಗ್ರಹಿಸಿದ ವರದಿ ತಿಳಿಸಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಬುಧವಾರವೂ ಹೋರಾಟ ನಡೆಯಿತು. ಕಬ್ಬು ಬೆಳೆಗಾರರ ಸಂಘದ ಸದಸ್ಯರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರೆ, ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಂಡು ಪ್ರತಿಭಟನೆ ನಡೆಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಣಿಪುರದಲ್ಲಿನ ಹಿಂಸಾಚಾರ ಕುರಿತು ಪ್ರಕಟಿಸಿರುವ ವರದಿಗೆ ಸಂಬಂಧಿಸಿ ಭಾರತೀಯ ಸಂಪಾದಕರ ಒಕ್ಕೂಟದ (ಇಜಿಐ) ನಾಲ್ವರ ಸದಸ್ಯರ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ಅನ್ವಯ ಅವರ ವಿರುದ್ದ ಸೆ.11ರ ವರೆಗೆ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯು ಮುಂಬರುವ ಏಕದಿನ ವಿಶ್ವಕಪ್ ಸರಣಿಗೆ ತನ್ನ ತಂಡವನ್ನು ಪ್ರಕಟಿಸಿದೆ. 2023ರ ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಭಾರತದಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈಗಾಗಲೇ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಇದೀಗ ಆಸ್ಟ್ರೇಲಿಯಾ ಕೂಡಾ ತನ್ನ ತಂಡದ 15 ಸದಸ್ಯರ ಪಟ್ಟಿಯನ್ನು ಪ್ರಕಟಿಸಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಅಬಿನಯದ ಬಹು ನಿರೀಕ್ಷಿತ ಜವಾನ್ ಚಿತ್ರ ಬಿಡುಗಡೆಗೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಚಿತ್ರವು ಮುಂಗಡ ಟಿಕೆಟ್ ಬುಕಿಂಗ್ ಮೂಲಕವೇ ಸುದ್ದಿ ಮಾಡಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಧಿಕ ಸಂಬಳ, ಉತ್ತಮ ಕೆಲಸ’ ಎಂಬ ಏಜೆಂಟ್ ಮಾತು ನಂಬಿ ಕುವೈತ್‌ಗೆ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ವಿಜಯಪುರದ ಬಬಲೇಶ್ವರ ತಾಲ್ಲೂಕಿನ ಅಡವಿ ಸಂಗಾಪುರದ ಇಬ್ಬರು ಯುವಕರನ್ನು ಕೇಂದ್ರ ಸರ್ಕಾರದ ನೆರವಿನಿಂದ ಮರಳಿ ಊರಿಗೆ ಕರೆತರಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಉಮೇಶ ಕೋಳಕೂರ ತಿಳಿಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಸ್ಕತ್ ಪೊಟ್ಟಣದ ಮೇಲೆ ನಮೂದಿಸಿದ್ದಕ್ಕಿಂತ ಒಂದು ಬಿಸ್ಕತ್ ಕಡಿಮೆ ಇದೆ ಎಂಬ ಆರೋಪವನ್ನು ಎತ್ತಿ ಹಿಡಿದಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಐಟಿಸಿ ಕಂಪನಿಗೆ ₹1 ಲಕ್ಷ ದಂಡ ವಿಧಿಸಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಿತ್ರವನ್ನು ಅಮೆರಿಕದ ಬಾಹ್ಯಾಕಾಶ ಅಧ್ಯಯನ ಸಂಸ್ಥೆ 'ನಾಸಾ' ಹಂಚಿಕೊಂಡಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.