ಬುಲ್ಧಾನ: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಕಾಂಕ್ರೀಟ್ ಕಂಬಗಳನ್ನು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೋರಖೇಡಿ-ವಡಗಾಂವ್ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

‘ವಿದ್ಯುತ್ ಕೇಬಲ್ ಅಳವಡಿಸಲು ಬಳಸುವ ಕಾಂಕ್ರೀಟ್ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಐವರು ಕುಳಿತಿದ್ದರು. ಪುನ್ಹೈ ಗ್ರಾಮದ ಬಳಿಯ ತಿರುವಿನಲ್ಲಿ ವಾಹನವು ಹಠಾತ್ ಪಲ್ಟಿಯಾಗಿದೆ. ಕಾಂಕ್ರೀಟ್ ಕಂಬಗಳು ಐವರ ಮೇಲೆ ಬಿದ್ದಿದ್ದು, ಗಂಭೀರ ಗಾಯಗಳಾಗಿವೆ’ ಎಂದು ಬೋರಖೇಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ಪಡೆದ ಬೋರಖೇಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಗಾಯಾಳುಗಳು ಬುಲ್ಧಾನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.