ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ರೈಲ್ವೆ ಸುರಕ್ಷತಾ ಪಡೆಯ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚೇತನ್ ಅವರನ್ನು ಬೋರಿವಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸರು ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡದ ಕಾರಣ ನ್ಯಾಯಾಲಯ ಚೇತನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಲ್ಲದೇ, ಆರೋಪಿಯನ್ನು ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆಗೆ ಒಳಪಡಿಸಲು ತನಿಖಾ ಸಂಸ್ಥೆಗೆ ಕೋರ್ಟ್ ಅನುಮತಿ ನೀಡಲು ನಿರಾಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.