ಭೋಪಾಲ್: ದೇಶದಲ್ಲಿ ತ್ರಿವಳಿ ತಲಾಖ್ ಪ್ರಕರಣಗಳು ಕಡಿಮೆಯಾಗಿವೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ (ಎನ್ಸಿಎಂ) ಶನಿವಾರ ತಿಳಿಸಿದೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಎನ್ಸಿಎಂ ಸದಸ್ಯೆ ಸೈಯದ್ ಶಹಝಾದಿ ಅವರು,‘ ನಾನು ತ್ರಿವಳಿ ತಲಾಖ್ ಮತ್ತು ಇತರೆ ಸಮಸ್ಯೆಗಳ ಬಗ್ಗೆ ಮುಸ್ಲಿಂ ಮಹಿಳೆಯರೊಂದಿಗೆ ಮಾತುಕತೆ ನಡೆಸಿದ್ದೇನೆ. ತ್ರಿವಳಿ ತಲಾಖ್ ವಿರುದ್ಧ ಕಾನೂನು ಕ್ರಮ ಜಾರಿಗೆ ಬಂದ ನಂತರ ಈ ರೀತಿಯ ವಿಚ್ಛೇದನಗಳು ಕಡಿಮೆಯಾಗಿವೆ’ ಎಂದು ಹೇಳಿದರು.

ಎರಡು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯರ(ವೈವಾಹಿಕ ಹಕ್ಕುಗಳ ರಕ್ಷಣೆ) ಕಾಯ್ದೆ 2019ರಡಿ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದರು. ಈ ಕಾನೂನಿನಡಿ ತ್ರಿವಳಿ ತಲಾಖ್ ಅಥವಾತಲಾಖ್–ಇ–ಬಿದ್ದತ್ ಆಚರಣೆಯನ್ನುಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗಿದ್ದು, ಕಾನೂನು ಉಲ್ಲಂಘಿಸಿದವರು ಮೂರು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೂ ಗುರಿಯಾಗಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.