ಹೈದರಾಬಾದ್: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷವು ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸಲು ಶುಕ್ರವಾರ ತೀರ್ಮಾನಿಸಿದೆ.

ಈ ಸಂಬಂಧ ಟಿಆರ್ಎಸ್ನ ಸಂಸದೀಯ ಪಕ್ಷದ ನಾಯಕ ಡಾ. ಕೆ. ಕೇಶವ ರಾವ್ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:ಆಳ್ವ ಯಾರಿಗಾದರೂ ಕರೆ ಮಾಡಬಹುದು: ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿದ ಕೇಂದ್ರ

‘ಟಿಆರ್ಎಸ್ನ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಅಳ್ವಾ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಅವರ ನಿರ್ಧಾರದಂತೆ ಪಕ್ಷದ 16 ಸಂಸದರೂ ಮತ ಚಲಾಯಿಸಬೇಕು ಎಂದು ಸೂಚಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6ರಂದು ಚುನಾವಣೆ ನಿಗದಿಯಾಗಿದ್ದು ಅಂದೇ ಫಲಿತಾಂಶ ಹೊರಬೀಳಲಿದೆ.

ಲೋಕಸಭಾ, ರಾಜ್ಯಸಭಾ ಸದಸ್ಯರು (ನಾಮ ನಿರ್ದೇಶಿತ ಸದಸ್ಯರೂ ಸೇರಿ) ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವರು. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.

ರಾಜಸ್ಥಾನದ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಅವರನ್ನು ವಿರೋಧ ಪಕ್ಷಗಳು ತಮ್ಮ ಅಭ್ಯರ್ಥಿಯಾಗಿ ಘೋಷಿಸಿವೆ.

ಎನ್ಡಿಎ ತನ್ನ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ನಿಯೋಜಿಸಿದೆ.

ಉಪ ರಾಷ್ಟ್ರಪತಿ ಚುನಾವಣೆಗೆ ಗೈರಾಗಲು ಟಿಎಂಸಿ ತೀರ್ಮಾನಿಸಿದೆ.

ಇವುಗಳನ್ನೂ ಓದಿ...

ಆ ‘ಬಿಗ್ ಬ್ರದರ್’ ಎಲ್ಲವನ್ನೂ ಕದ್ದು ಕೇಳಿಸಿಕೊಳ್ಳುತ್ತಿದ್ದಾರೆ: ಮಾರ್ಗರೇಟ್ ಆಳ್ವ

ಅಹಂ, ಕೋಪಕ್ಕೆ ಇದು ಸಮಯವಲ್ಲ: ಟಿಎಂಸಿ ಉದ್ದೇಶಿಸಿ ಮಾರ್ಗರೇಟ್ ಆಳ್ವ ಹೇಳಿಕೆ

ಸಿದ್ಧಾಂತದ ಜೊತೆ ರಾಜಿಯಾಗದ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ

ದೇಶದ ಉನ್ನತ ಹುದ್ದೆಗಳು ಉತ್ತರದವರ ಪಾಲು: ಮಾರ್ಗರೇಟ್ ಆಳ್ವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.