ಹೆದರಾಬಾದ್: ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್‌ಗೆ ಉತ್ತರ ನೀಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರ ಪುತ್ರಿ ಕೆ. ಕವಿತಾ, ವಿಚಾರಣೆ ದಿನಾಂಕ ಮುಂದೂಡುವಂತೆ ಪತ್ರ ಬರೆದಿದ್ದಾರೆ.

ಡಿಸೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಟಿಆರ್‌ಸಿ ಎಂಎಲ್‌ಸಿ ಆಗಿರುವ ಕೆ. ಕವಿತಾ ಅವರಿಗೆ ಸಿಬಿಐ ನೋಟಿಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ:ರಾಹುಲ್ ಗಾಂಧಿ, ಅಶೋಕ್ ಗೆಹಲೋತ್, ಸಚಿನ್ ಪೈಲಟ್ ಬಿಂದಾಸ್ ಡ್ಯಾನ್ಸ್

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕವಿತಾ, ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಡಿ. 11, 12, 13 ಮತ್ತು 15 ದಿನಾಂಕಗಳ ಪೈಕಿ ಸಿಬಿಐ ಅನುಕೂಲಕ್ಕೆ ತಕ್ಕಂತೆ ತಮ್ಮ ನಿವಾಸದಲ್ಲಿ ಭೇಟಿಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.

ನಾನು ಕಾನೂನಿಗೆ ಬದ್ಧವಾಗಿದ್ದು, ತನಿಖೆಗೆ ಸಹಕರಿಸುತ್ತೇನೆ. ಬದಲಿದಿನಾಂಕದಂದು ವಿಚಾರಣೆಗೆ ಹಾಜರಾಗಲು ಸಿದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.

ಎಫ್‌ಐಆರ್ ಪ್ರತಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸಿದ್ದು, ತಮ್ಮ ಹೆಸರು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.