ಹೈದರಾಬಾದ್:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿಯಲು ತೆಲಂಗಾಣದ ಅರಿಶಿಣ ಬೆಳೆಗಾರರು ನಿರ್ಧರಿಸಿದ್ದಾರೆ.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ, ಪ್ರತಿಭಟನಾಪೂರ್ವಕವಾಗಿ ಮೋದಿ ವಿರುದ್ಧ ಸ್ಪರ್ಧಿಸುತ್ತಿದ್ದೇವೆ ಎಂದು ರೈತರು ಹೇಳಿದ್ದಾರೆ.

ಅಖಿಲ ಭಾರತ ಅರಿಶಿಣ ಬೆಳೆಗಾರರ ಸಂಘದ ವತಿಯಿಂದ ಕನಿಷ್ಠ 50 ರೈತರು ಮೋದಿ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ವಿರುದ್ಧ ಇದೇ ಸಂಘಟನೆಯ 178 ರೈತರು ನಿಜಾಮಾಬಾದ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ ಈ 178ರಲ್ಲಿ ಒಬ್ಬರೂ ಮೋದಿ ವಿರುದ್ಧ ಸ್ಪರ್ಧಿಸುವುದಿಲ್ಲ. ಬೇರೆ ರೈತರು ಕಣಕ್ಕೆ ಇಳಿಯಲಿದ್ದಾರೆ ಎಂದು ಸಂಘವು ತಿಳಿಸಿದೆ.

ಮೋದಿ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾವು 28ರಂದು ನಾಮಪತ್ರ ಸಲ್ಲಿಸಲಿದ್ದೇವೆ. 50ಕ್ಕಿಂತಲೂ ಹೆಚ್ಚು ಜನರನ್ನು ಕಣಕ್ಕೆ ಇಳಿಸಬೇಕು ಎಂದು ಬಯಸಿದ್ದೇವೆ. ಠೇವಣಿಗಾಗಿ ಹಣ ಹೊಂದಿಸುತ್ತಿದ್ದೇವೆ ಎಂದು ಸಂಘವು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.