ಬೆಂಗಳೂರು: ಜಮ್ಮು–ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಆಕಸ್ಮಿಕ ಗ್ರೆನೇಡ್ ಸ್ಫೋಟದಲ್ಲಿ ಸೇನಾಪಡೆಯ ಕ್ಯಾಪ್ಟನ್ ಸಹಿತ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕ್ಯಾಪ್ಟನ್ ಆನಂದ್ ಮತ್ತು ನೇಬ್ ಸುಬೇದಾರ್ ಭಗವಾನ್ ಸಿಂಗ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸೇನಾ ವಕ್ತಾರ ಲೆ. ಕರ್ನಲ್ ದೇವೆಂದರ್ ಆನಂದ್ ಅವರು ಮಾಹಿತಿ ನೀಡಿದ್ದು, ಇಬ್ಬರೂ ಅಧಿಕಾರಿಗಳು ಗಡಿನಿಯಂತ್ರಣ ರೇಖೆಯ ಮೀಂಧರ್ ಸೆಕ್ಟರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.

ಗಡಿ ಬಿಕ್ಕಟ್ಟು: ಭಾರತ, ಚೀನಾ ಮಧ್ಯೆ 16ನೇ ಸುತ್ತಿನ ಮಾತುಕತೆ

ಗಾಯಗೊಂಡಿದ್ದ ಇಬ್ಬರು ಅಧಿಕಾರಿಗಳನ್ನು ಕೂಡಲೇ ಹೆಲಿಕಾಪ್ಟರ್ ಮೂಲಕ ಉಧಂಪುರದ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತದ ಎರಡು ವಿಮಾನಗಳಲ್ಲಿ ತಾಂತ್ರಿಕ ದೋಷ, ಮತ್ತೊಂದರ ಕಾಕ್ಪಿಟ್ನಲ್ಲಿ ಹಕ್ಕಿ!

ಈ ಕುರಿತು ಸೇನೆ ತನಿಖೆಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.