ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯ ಇಟ್ಟಿಗೆ ಗೂಡಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಟಿಗೋರಾ ಪ್ರದೇಶದಲ್ಲಿ ಘಟನೆ ನಡೆದಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಇಟ್ಟಿಗೆ ಗೂಡಿನ ಆವರಣದಲ್ಲಿ ಸ್ಥಳೀಯ ಮಸೀದಿಯ ಇಮಾಮ್ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಮಾಮ್ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಗಾಯಗೊಂಡವರನ್ನು ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಅಗ್ನಿ ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.