ತ್ರಿಶ್ಶೂರ್: ಕೇರಳದ ತ್ರಿಶ್ಶೂರ್ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಎರಡು ದಿನದ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವನ್ನು ಚೀಲದಲ್ಲಿರಿಸಿ ಯಾರೋ ಅಲ್ಲಿ ಇಟ್ಟು ಹೋಗಿದ್ದಾರೆ.
.ಬೀದರ್: ಕಸದ ತೊಟ್ಟಿಯಲ್ಲಿ ಸಿಕ್ಕ ನವಜಾತ ಶಿಶುಗಳ ರಕ್ಷಣೆ.
ಚೀಲವನ್ನು ಮೊದಲು ಕಸ ಗುಡಿಸುವವರು ಗಮನಿಸಿದ್ದು, ಬಳಿಕ, ರೈಲ್ವೆ ಪೊಲೀಸ್ ಪಡೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅದರೊಳಗೆ ಎರಡು ದಿನದ ನವಜಾತ ಶಿಶುವಿನ ಮೃತದೇಹ ಕಂಡು ಬಂದಿದೆ.

‘ಚೀಲದೊಳಗೆ ಎರಡು ದಿನ ಗಂಡು ಮಗುವಿನ ಶವ ಪತ್ತೆಯಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ’ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ.
ಈ ಬಗ್ಗೆ ರೈಲ್ವೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಲ್ಲಿ ಚೀಲ ಇಟ್ಟವರ ಪತ್ತೆಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಗುವಿನ ಮೃತದೇಹವನ್ನು ತ್ರಿಶ್ಶೂರ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.
.ದೆಹಲಿ | ಹೆಣ್ಣುಮಕ್ಕಳ ಜನನದಿಂದ ಬೇಸರ: ಅವಳಿ ನವಜಾತ ಶಿಶುಗಳನ್ನು ಕೊಂದ ತಂದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.