ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ರಾತ್ರಿ ಬೀಸಿದ ಬಿರುಗಾಳಿಗೆ ಕನಿಷ್ಠ ಇಬ್ಬರು ಸಾವಿಗೀಡಾಗಿ, 23 ಮಂದಿ ಗಾಯಗೊಂಡಿದ್ದಾರೆ. ಬಲವಾದ ಗಾಳಿಯಿಂದಾಗಿ ಮರಗಳು ಬುಡಸಮೇತ ಕಿತ್ತು ಬಂದಿದ್ದು, ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ರಾಜಧಾನಿಯ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಗಾಳಿ ಹೊತ್ತುತಂದ ದೂಳು ಜನರಿಗೆ ತೊಂದರೆಯುಂಟು ಮಾಡಿದೆ.
.ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ: ಪಾಕ್ ಮಾಜಿ ಸಚಿವರ ಪ್ರತಿಕ್ರಿಯೆ ಹೀಗಿತ್ತು....
ಪಶ್ಚಿಮ ದೆಹಲಿಯ ವಿಕಾಸ್‌ಪುರಿಯ ಜನಕಪುರಿ ಫ್ಳೈ ಓವರ್ ಬಳಿ ದ್ವಿಚಕ್ರ ವಾಹನದ ಮೇಲೆ ಮರದ ಕೊಂಬೆ ಬಿದ್ದು ಸವಾರ ಸಾವಿಗೀಡಾಗಿದ್ದಾನೆ. ಜೈಪ್ರಕಾಶ್ ಎಂಬವರೇ ಮೃತ ವ್ಯಕ್ತಿ.

ಕ್ರೇನ್‌ಗಳ ಸಹಾಯದಿಂದ ಕೊಂಬೆಯನ್ನು ತೆಗೆದು, ಸವಾರನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಕಾರೊಂದಕ್ಕೆ ಹಾನಿ ಸಂಭವಿಸಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಹನುಮಂತನ ದೇವಾಲಯಕ್ಕೆ ಭೇಟಿ ನೀಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್.
ಕೆ.ಎನ್ ಕಾಡ್ಜು ರಸ್ತೆಯ ಐಬಿ ಬ್ಲಾಕ್ ಸಮೀಪ ಮರದ ಕೆಳಗೆ ನಿಂತಿದ್ದ ಹರಿ ಓಂ ಎಂಬ ಕಾರ್ಮಿಕರ ಮೇಲೆ ಕೊಂಬೆ ಬಿದ್ದು ಸಾವಿಗೀಡಾಗಿದ್ದಾರೆ. ರಾತ್ರಿ 11 ಗಂಟೆ ವೇಳೆಗೆ ಈ ಘಟನೆ ನಡೆದಿದೆ.

ಮರ, ವಿದ್ಯುತ್ ಕಂಬ ಹಾಗೂ ಹೋರ್ಡಿಂಗ್‌ಗಳು ಬಿದ್ದಿರುವುದರ ಬಗ್ಗೆ 152 ಕರೆಗಳು ತುರ್ತು ಸಹಾಯವಾಣಿಗೆ ಬಂದಿವೆ. ಕಟ್ಟಡಗಳು ಭಾಗಶಃ ಕುಸಿದಿರುವುದರ ಬಗ್ಗೆ 55 ಕರೆಗಳು, ವಿದ್ಯುತ್ ವ್ಯತ್ಯಯ ಬಗ್ಗೆ 202 ಕರೆಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಟ್ಟ ಹವಾಮಾನದಿಂದಾಗಿ 9 ವಿಮಾನಗಳ ಮಾರ್ಗವನ್ನೂ ಬದಲಿಸಲಾಗಿದೆ.
.ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.