ರಾಯ್ಪುರ: ಛತ್ತೀಸ್ಗಢ ರಾಜಧಾನಿ ರಾಯ್ಪುರದ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಗರದ ಮಿನಿ ಮಾಟ ಚೌಕ್ ಬಳಿ ಇರುವ ವಸತಿ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಜ್ವಾಲೆ ಕಾಣಿಸಿಕೊಂಡಿದ್ದು, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ವಿಷಯ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ತಂಡ ಮತ್ತು ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದವು. ಕಟ್ಟಡದ ಆವರಣ ದಟ್ಟ ಹೊಗೆಯಿಂದ ತುಂಬಿತ್ತು. ಒಬ್ಬ ಪುರುಷ ಮತ್ತು ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಅಧಿಕಾರಿ ತಿಳಿಸಿದ್ದಾರೆ.

ಅವಘಡದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.