ಕೊಯಮತ್ತೂರು: ಸಮಾಜ ಸುಧಾರಕ ಪೆರಿಯಾರ್ ಇ.ವಿ. ರಾಮಸ್ವಾಮಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ಆರೋಪದಲ್ಲಿ ಇಲ್ಲಿನ ಹಿಂದೂ ಮುನ್ನಣಿ ಸಂಘಟನೆಯ ಇಬ್ಬರು ಪದಾಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅರುಣ್ ಕಾರ್ತಿಕ್ ಮತ್ತು ಮೋಹನ್ ರಾಜ್ ಬಂಧಿತ ಆರೋಪಿಗಳು. ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಪರಿಶೀಲಿಸಿ ಆರೋಪಿಗಳನ್ನು ಗುರುತಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವೆಲ್ಲೂರಿನಪೆರಿಯಾರ್ ಅಧ್ಯಯನ ಕೇಂದ್ರದ ಮುಂಭಾಗದಲ್ಲಿ ಸ್ಥಾಪಿಸಿದ್ದ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ, ಕೇಸರಿ ಬಣ್ಣದ ಪುಡಿ ಹಚ್ಚಿರುವುದು ಭಾನುವಾರ ಬೆಳಿಗ್ಗೆ ಕಂಡುಬಂದಿದ್ದು, ಇದನ್ನು ಖಂಡಿಸಿ ದ್ರಾವಿಡ ಕಳಗಂ ಮೊದಲಾದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.