ಮೊರೇನಾ (ಮಧ್ಯಪ್ರದೇಶ): ಟ್ರ್ಯಾಕ್ಟರ್ಗೆ ಟ್ರಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ ಇಬ್ಬರು ಕಾವಡ್ ಯಾತ್ರಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೊರೇನಾನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44ರಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ಘಟನೆಯಿಂದ ಇದರಿಂದ ಆಕ್ರೋಶಗೊಂಡ ಸ್ಥಳೀಯರು ಟ್ರಕ್ ಚಾಲಕನನ್ನು ಮನಸೋಇಚ್ಛೆ ಥಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಸಿಹೋನಿಯಾ ಪ್ರದೇಶದ ಭರತ್ ಲಾಲ್ ಶರ್ಮಾ (37), ರಾಮನರೇಶ್ ಶ್ರಮ (26) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೊರೇನಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಠಾಕೂರ್ ಮಾಹಿತಿ ನೀಡಿದ್ದಾರೆ.

ಗಾಜಿಯಾಬಾದ್ ಜಿಲ್ಲೆಯ ಮುರಾದ್ ನಗರದಲ್ಲಿ ‘ಕಾವಡ್ ಯಾತ್ರೆ’ಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದ ಬಳಿಕ ಗಾಜಿಯಾಬಾದ್ನ ವಿವಿಧೆಡೆ ಭದ್ರತೆ ಹೆಚ್ಚಿಸಲಾಗಿದ್ದು, ಹಲವೆಡೆ ಸಂಚಾರ ನಿರ್ಬಂಧ ವಿಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಬಳಿಕ ಯಾತ್ರಾರ್ಥಿಗಳು ದೆಹಲಿ– ಮೀರತ್ ಎಕ್ಸ್ಪ್ರೆಸ್ವೇ ತಡೆದು, ಗಲಾಟೆ ನಡೆಸಿದರು. ಇದರಿಂದ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.