ಸಿರೋಬಗಢ: ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವೆಡೆ ಕಟ್ಟಡಗಳಿಗೆ ಹಾನಿಯಾಗಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಸಿರೋಬಗಢ ಬಳಿ ಭೂಕುಸಿತ ಸಂಭವಿಸಿರುವುದರಿಂದ ಬದರಿನಾಥ–ರಿಷಿಕೇಶ ಹೆದ್ದಾರಿ ಬಂದ್ ಮಾಡಲಾಗಿದೆ. ಇದರಿಂದಾಗಿ ಬದರಿನಾಥ ಮತ್ತು ಕೇದಾರನಾಥಕ್ಕೆ ಹೋಗುವ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ವರದಿಯಾಗಿದೆ.

ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಡರಾತ್ರಿಯ ನಿರಂತರ ಮಳೆಯಿಂದಾಗಿ ರುದ್ರಪ್ರಯಾಗ ಮತ್ತು ಪೌರಿ ಜಿಲ್ಲೆಗಳ ಗಡಿಯಲ್ಲಿರುವ ಸಿರೋಬಗಢ ಬಳಿ ಬೆಟ್ಟದಿಂದ ಕಲ್ಲುಗಳು ಹೆದ್ದಾರಿಗೆ ಕುಸಿಯುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಸೋಮವಾರದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
.ದೆಹಲಿಯಲ್ಲಿ ಭಾರಿ ಮಳೆ: ಧರೆಗುರುಳಿದ ಮರಗಳು, ಇಬ್ಬರು ಸಾವು –ಹಲವರಿಗೆ ಗಾಯ.ನಾಳೆಯಿಂದ ತೆರೆಯಲಿವೆ ಕೇದಾರನಾಥ, ಗಂಗೋತ್ರಿ, ಯಮುನೇತ್ರಿ ದೇಗುಲಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.