ಲುಧಿಯಾನ (ಪಂಜಾಬ್): ಲುಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋರ್ಟ್ ಸಂಕೀರ್ಣದ ಎರಡನೇ ಮಹಡಿಯ ಶೌಚಗೃಹದಲ್ಲಿ ಸ್ಫೋಟ ಉಂಟಾಗಿದೆ ಎಂದು ಪೊಲೀಸರು ಹೇಳಿದರು.

ಸ್ಫೋಟ ಸಂಭವಿಸಿದಾಗ ಜಿಲ್ಲಾ ನ್ಯಾಯಾಲಯವು ಕಾರ್ಯನಿರ್ವಹಿಸುತ್ತಿತ್ತು.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಜತೆಗೆ, ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ, ಸ್ಫೋಟದ ಪರಿಸ್ಥಿತಿಯನ್ನು ಅವಲೋಕಿಸಲು ಲುಧಿಯಾನಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.