ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಸೋಮವಾರ ಮತ್ತಿಬ್ಬರು ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಅರವಿಂದ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು.

ಈ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ.

ನ್ಯಾಯಮೂರ್ತಿ ಬಿಂದಾಲ್ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ, ನ್ಯಾಯಮೂರ್ತಿ ಕುಮಾರ್ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡುತ್ತಿದ್ದರು.

ಈ ಇಬ್ಬರೂ ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಕ್ಕೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 31ರಂದು ಶಿಫಾರಸು ಮಾಡಿತ್ತು.

ಕಳೆದ ವಾರ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳು ನೇಮಕಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.