ಅಹಮದಾಬಾದ್ (ಗುಜರಾತ್): ಇಲ್ಲಿನ ಧೋಲ್ಕಾ ನಗರದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ಇಬ್ಬರು ಪೌರಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತರನ್ನು ಗೋಪಾಲ್ ಪಧಾರ್(24), ಬಿಜಲ್ ಪಧಾರ್(32) ಎಂದು ಗುರುತಿಸಲಾಗಿದೆ. ಇವರು ಶನಿವಾರ ಸಂಜೆ ವೇಳೆ ಸ್ವಚ್ಛಗೊಳಿಸಲು ಚರಂಡಿಗೆ ಇಳಿದಿದ್ದರು. ಈ ಸಂದರ್ಭ ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದಾರೆ.

ಪ್ರಜ್ಞಾಹೀನರಾದ ಇಬ್ಬರನ್ನೂ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ(ಗುಜರಾತ್) ವಿವಿಧ ಭಾಗಗಳಲ್ಲಿ ಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ 11 ಜನ ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಗುಜರಾತ್ ಸರ್ಕಾರ ಇತ್ತೀಚೆಗೆ ವಿಧಾನಸಭೆಯಲ್ಲಿ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.