ನವದೆಹಲಿ: ಉತ್ತರ ದೆಹಲಿಯ ಸದರ್ ಬಜಾರ್ ಪ್ರದೇಶದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಬೆಂಕಿ ಕಾಣಿಸಿಕೊಂಡಿರುವ ಕುರಿತು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕರೆ ಬಂದಿತ್ತು. ಕೂಡಲೇ ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲವು ನಿವಾಸಿಗಳನ್ನು ರಕ್ಷಿಸಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಗುಲಾಷ್ನಾ (14) ಮತ್ತು ಅನಯಾ (12) ಕಟ್ಟಡದ ಮೊದಲ ಮಹಡಿಯ ಸ್ನಾನಗೃಹದಲ್ಲಿ ಸಿಲುಕಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಸದರ್ ಬಜಾರ್ ಪೊಲೀಸ್ ಠಾಣೆಯ ಉಪ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಜತೆಗೆ, ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.