ನವದೆಹಲಿ: ಪಶ್ಚಿಮ ದೆಹಲಿಯ ಕೀರ್ತಿನಗರ ಪ್ರದೇಶದಲ್ಲಿರುವ ಪೀಠೋಪಕರಣಗಳ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಅತುಲ್ ರೈ (45), ನಂದ್ ಕಿಶೋರ್ (65) ಎಂದು ಗುರುತಿಸಲಾಗಿದೆ. ಗೋದಾಮಿನ ಟೆರೇಸ್ನಲ್ಲಿರುವ ಕೋಣೆಯಲ್ಲಿ ಮಲಗಿದ್ದರು ಎಂದು ತಿಳಿದುಬಂದಿದೆ.

‘ಇಂದು (ಭಾನುವಾರ) ಮುಂಜಾನೆ 4.25ರ ಸುಮಾರಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ’ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಧಿ ವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.