ಮಥುರಾ (ಉತ್ತರಪ್ರದೇಶ): ಮಥುರಾ ಜಿಲ್ಲೆಯ ಜನನಿಬಿಡ ಪ್ರದೇಶದಲ್ಲಿ ಓವರ್ಹೆಡ್ ಟ್ಯಾಂಕ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣ ವಿಹಾರ್ ಕಾಲೋನಿಯಲ್ಲಿ ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಮೃತ ಮಹಿಳೆಯರನ್ನು ಸುಂದರಿ (65) ಮತ್ತು ಸರಿತಾ (27) ಎಂದು ಗುರುತಿಸಲಾಗಿದೆ.

ಐವರು ಮಹಿಳೆಯರು ಸೇರಿದಂತೆ ಇತರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಗ್ರಾದ ಎಸ್ಎನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶೈಲೇಂದ್ರ ಕುಮಾರ್ ಹೇಳಿದ್ದಾರೆ.

2021ರಲ್ಲಿ ಜಲ ನಿಗಮವು ಗಂಗಾಜಲ ಕುಡಿಯುವ ನೀರು ಯೋಜನೆಯಡಿ ₹6 ಕೋಟಿ ವೆಚ್ಚದಲ್ಲಿ ನೀರಿನ ಟ್ಯಾಂಕ್ ಅನ್ನು ನಿರ್ಮಾಣ ಮಾಡಿತ್ತು. ಆದರೆ, ಕೇವಲ ಮೂರೇ ವರ್ಷಗಳಲ್ಲಿ ಕುಸಿದು ಬಿದ್ದಿರುವುದು ಆತಂಕ ಮೂಡಿಸಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.